ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ನಡುವೆ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಖಡಕ್ ವಾರ್ನಿಂಗ್ ನೀಡಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದಿನಿಂದ ಎಂದಿನಂತೆ ಕೆಲಸ ಮಾಡಲು ಮುಂದಾಗಿದ್ದಾರೆ.
ಈ ನಡುವೆ ಖಾಸಗಿ ವೈದ್ಯರು ಮಸೂದೆಯನ್ನು ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೇಳೆಯಲ್ಲಿ ಅತ್ತ ಸಕ್ಕರೆ ನಾಡು ಮಂಡ್ಯದ ವೈದ್ಯರೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅವರ ಹೆಸರು ಡಾ ಶಂಕರೇಗೌಡ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.
ಕೆ.ಪಿ.ಎಂ.ಈ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಯಾವುದೇ ಬೆಂಬಲ ನೀಡದೆ ತಮ್ಮ ಪಾಡಿಗೆ ತಮ್ಮ ಕೆಲಸವನ್ನು ಮಾಡುತ್ತ, ರೋಗಿಗಳ ಸೇವೆಯಲ್ಲಿ ತಮ್ಮನು ತೊಡಗಿಸಿಕೊಂಡಿದ್ದರು. ಡಾ.ಶಂಕರೇಗೌಡ. ಚರ್ಮ ರೋಗದ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದವರು.
ಶಿವಳ್ಳಿ ಗ್ರಾಮದವರಾದ ಇವರು ಬೆಳಿಗ್ಗೆ ತಮ್ಮ ಗ್ರಾಮದಲ್ಲಿ ಮತ್ತು ಮಧ್ಯಾಹ್ನ ಮಂಡ್ಯದ ತಮ್ಮ ಚಿಕಿತ್ಸಾಲಯದಲ್ಲಿ ರೋಗಿಗಳಿಗೆ ಕೇವಲ 5 ರೂ ಪಡೆದು ಚಿಕಿತ್ಸೆ ನೀಡುತ್ತಾರೆ. ಎಷ್ಟೋ ಬಾರಿ 5 ರೂ ಗಳನ್ನು ಸಹ ಪಡೆಯುವುದಿಲ್ಲ. ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಶಂಕರೇ ಗೌಡರು ತಮ್ಮ 6 ಎಕರೆ ಭೂಮಿಯಲ್ಲಿ ಕೃಷಿ ಕೆಲಸದಲ್ಲೂ ತೊಡಗಿದ್ದಾರೆ , ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ.
ತಮ್ಮ ವೃತ್ತಿ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಶಂಕರೇ ಗೌಡರು ನಾನು ಹಣ ಮಾಡುವುದಕ್ಕೆ ಈ ವೃತ್ತಿಯನ್ನು ಆಯ್ದುಕೊಂಡಿಲ್ಲ, ಜನರ ಸೇವೆಯೇ ನನ್ನ ಉದ್ದೇಶ ಅಂತ ಹೇಳುತ್ತಾರೆ. ಇದೇ ವೇಳೆ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆ ಬಗ್ಗೆ ಕೂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕಾಯಿದೆ ಬಹಳ ಕಾಲದ ಹಿಂದೆ ಜಾರಿಗೆ ಬರಬೇಕಾಗಿತ್ತು, ಆದರೆ ತಡವಾಗಿ ಈ ಕಾಯ್ದೆ ಜಾರಿಗೆ ಬರಲು ಸಿದ್ದವಾಗಿರುವುದು ಖುಷಿಯ ವಿಚಾರ ಅಂತ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?