ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.
ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.
ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…