ಸುದ್ದಿ

ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

613

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ.

ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ ಸ್ವಯಂಚಾಲಿತ ರೈಫೆಲ್ಸ್​ಗಳು ಇವೆ. ಈ ವಿಡಿಯೋ ನಿಮ್ಮನ್ನು ತಲುಪುವ ಹೊತ್ತಿಗೆ ನಾನು ಸ್ವರ್ಗದಲ್ಲಿರುತ್ತೇನೆ. ಕಳೆದ ಒಂದು ವರ್ಷ ನಾನು ಜೈಶ್​- ಇ- ಮೊಹಮ್ಮದ್​ ಸಂಘಟನೆಯಲ್ಲಿ ಕಳೆದಿದ್ದೇನೆ ಮತ್ತು ಕಾಶ್ಮೀರದ ಜನರಿಗೆ ಇದು ನನ್ನ ಕಡೆಯ ಸಂದೇಶ,” ಎಂದು ಹೇಳಿದ್ದಾನೆ.

ಅಲ್ಲದೆ ಉತ್ತರ ಕಾಶ್ಮೀರ ಜನತೆಗೆ ಕೂಡ ಸಂದೇಶ ಕಳುಹಿಸಿದ್ದು ಅದರಲ್ಲಿ ದಕ್ಷಿಣ ಕಾಶ್ಮೀರದ ಜನರು ತಮ್ಮ ಹಕ್ಕುಗಳಿಗಾಗಿ ಭಾರತ ಸರ್ಕಾರದ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದೀಗ ಅವರ ಜೊತೆ ಉತ್ತರ, ಕೇಂದ್ರ ಕಾಶ್ಮೀರ ಮತ್ತು ಜಮ್ಮು ಭಾಗದ ಜನರು ಕೂಡ ಕೈಜೋಡಿಸುವ ಕಾಲ ಸನ್ನಿಹಿತವಾಗಿದೆ. ನಮ್ಮ ಕೆಲವು ಉಗ್ರಗಾಮಿ ಕಮಾಂಡರ್ ಗಳನ್ನು ಕೊಂದ ಮಾತ್ರಕ್ಕೆ ನಮ್ಮನ್ನು ದುರ್ಬಲಗೊಳಿಸಬಹುದು ಎಂದು ಭಾವಿಸಬೇಕಾಗಿಲ್ಲ ಎಂದು ಕೂಡ ಹೇಳಿದ್ದಾನೆ. ವಿಡಿಯೊದಲ್ಲಿ ಕಾಶ್ಮೀರದ ಭದ್ರತಾ ಪಡೆ ಮೇಲೆ ಇತ್ತೀಚೆಗೆ ನಡೆದ ದಾಳಿಯನ್ನು ಪ್ರಸ್ತಾಪಿಸಿದ್ದಾನೆ.

ಜೈಶ್​ ಇ- ಮೊಹಮ್ಮದ್​ ಉಗ್ರಗಾಮಿ ಸಂಘಟನೆ ಈ ಹಿಂದೆ ಭಾರತದ ಮೇಲೆ ಹಲವು ಭೀಕರ ದಾಳಿ ನಡೆಸಿದೆ. ಐಸಿಎ18 ವಿಮಾನ ಹೈಜಾಕ್​, 2001ರಲ್ಲಿ ಸಂಸತ್ತು​ ಮೇಲೆ ದಾಳಿ, ನಾಗರೊಟ ದಾಳಿ, ಉರಿ ದಾಳಿ ಹಾಗೂ ಪಠಾಣ್​ಕೋಟ್​ ವಾಯುಪಡೆ ಮೇಲೆ ದಾಳಿ ನಡೆಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸಿನಿಮಾ

    ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

    ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು