ಸುದ್ದಿ

ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

605

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ.

ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ ಸ್ವಯಂಚಾಲಿತ ರೈಫೆಲ್ಸ್​ಗಳು ಇವೆ. ಈ ವಿಡಿಯೋ ನಿಮ್ಮನ್ನು ತಲುಪುವ ಹೊತ್ತಿಗೆ ನಾನು ಸ್ವರ್ಗದಲ್ಲಿರುತ್ತೇನೆ. ಕಳೆದ ಒಂದು ವರ್ಷ ನಾನು ಜೈಶ್​- ಇ- ಮೊಹಮ್ಮದ್​ ಸಂಘಟನೆಯಲ್ಲಿ ಕಳೆದಿದ್ದೇನೆ ಮತ್ತು ಕಾಶ್ಮೀರದ ಜನರಿಗೆ ಇದು ನನ್ನ ಕಡೆಯ ಸಂದೇಶ,” ಎಂದು ಹೇಳಿದ್ದಾನೆ.

ಅಲ್ಲದೆ ಉತ್ತರ ಕಾಶ್ಮೀರ ಜನತೆಗೆ ಕೂಡ ಸಂದೇಶ ಕಳುಹಿಸಿದ್ದು ಅದರಲ್ಲಿ ದಕ್ಷಿಣ ಕಾಶ್ಮೀರದ ಜನರು ತಮ್ಮ ಹಕ್ಕುಗಳಿಗಾಗಿ ಭಾರತ ಸರ್ಕಾರದ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದೀಗ ಅವರ ಜೊತೆ ಉತ್ತರ, ಕೇಂದ್ರ ಕಾಶ್ಮೀರ ಮತ್ತು ಜಮ್ಮು ಭಾಗದ ಜನರು ಕೂಡ ಕೈಜೋಡಿಸುವ ಕಾಲ ಸನ್ನಿಹಿತವಾಗಿದೆ. ನಮ್ಮ ಕೆಲವು ಉಗ್ರಗಾಮಿ ಕಮಾಂಡರ್ ಗಳನ್ನು ಕೊಂದ ಮಾತ್ರಕ್ಕೆ ನಮ್ಮನ್ನು ದುರ್ಬಲಗೊಳಿಸಬಹುದು ಎಂದು ಭಾವಿಸಬೇಕಾಗಿಲ್ಲ ಎಂದು ಕೂಡ ಹೇಳಿದ್ದಾನೆ. ವಿಡಿಯೊದಲ್ಲಿ ಕಾಶ್ಮೀರದ ಭದ್ರತಾ ಪಡೆ ಮೇಲೆ ಇತ್ತೀಚೆಗೆ ನಡೆದ ದಾಳಿಯನ್ನು ಪ್ರಸ್ತಾಪಿಸಿದ್ದಾನೆ.

ಜೈಶ್​ ಇ- ಮೊಹಮ್ಮದ್​ ಉಗ್ರಗಾಮಿ ಸಂಘಟನೆ ಈ ಹಿಂದೆ ಭಾರತದ ಮೇಲೆ ಹಲವು ಭೀಕರ ದಾಳಿ ನಡೆಸಿದೆ. ಐಸಿಎ18 ವಿಮಾನ ಹೈಜಾಕ್​, 2001ರಲ್ಲಿ ಸಂಸತ್ತು​ ಮೇಲೆ ದಾಳಿ, ನಾಗರೊಟ ದಾಳಿ, ಉರಿ ದಾಳಿ ಹಾಗೂ ಪಠಾಣ್​ಕೋಟ್​ ವಾಯುಪಡೆ ಮೇಲೆ ದಾಳಿ ನಡೆಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…