ಸುದ್ದಿ

ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

29

ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ.

ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ.

ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ.

ಹಾಗಂತ ಇಲ್ಲಿ ಬಂದವರಿಗೆ ಪುಕ್ಕಟೆ ತಿಂಗಳಿಗೆ ಈ ಹಣವನ್ನು ಕೊಟ್ಟು ಕೂರಿಸುವುದಿಲ್ಲ. ಇದಕ್ಕೆ ಷರತ್ತುಗಳು ಅನ್ವಯಿಸುತ್ತವೆ. ಇಲ್ಲಿ ಬರುವವರು ಸ್ಟೇಷನರಿ ಅಂಗಡಿ, ರೆಸ್ಟೋರೆಂಟ್ ಇಲ್ಲವೇ ಇನ್ಯಾವುದೋ ತರಹದ ಉದ್ಯೋಗ ಅಥವಾ ವ್ಯಾಪಾರವನ್ನು ಇಲ್ಲಿ ಪ್ರಾರಂಭಿಸಬೇಕು. ಅಂದರೆ ವ್ಯಾಪಾರಕ್ಕೆ 22000 ಪೌಂಡ್ ಲಭ್ಯವಾಗುತ್ತದೆ.

ಇದು ಮೂರು ವರ್ಷಗಳ ಕಾಲ ನಿರಂತರವಾಗಿ ಲಭಿಸುತ್ತದೆ ಎಂದು ಅಲ್ಲಿನ ಸ್ಥಳೀಯ ಅಧ್ಯಕ್ಷರಾದ ಡೊನಾಟ ಟೋಮ ಹೇಳಿಕೆ ನೀಡಿದ್ದಾರೆ. ಕಳೆದ ವರ್ಷ ಒಂದೇ ಒಂದು ಮಗು ಇಲ್ಲಿ ಹುಟ್ಟಿರುವ ದಾಖಲೆ ಇಲ್ಲ ಎಂಬುದು ಸರ್ಕಾರವನ್ನು ಆತಂಕಕ್ಕೆ ದೂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…