ವಿಚಿತ್ರ ಆದರೂ ಸತ್ಯ

ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

507

ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಅಪ್ರಾಪ್ತ, ಮುಗ್ದ ಬಾಲಕಿ ಮದುವೆ ಈಕೆಗಿಂತ ಐದು ಪಟ್ಟು ಹೆಚ್ಚು ವಯಸ್ಸಾಗಿರುವ ಪುರುಷನ ಜೊತೆಯಾಗಿತ್ತು. ಮದುವೆಯ ರಾತ್ರಿ ಆಂತರಿಕ ಗಾಯದಿಂದಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಯೆಮೆನ್ ನಲ್ಲಿ ಎರಡರಿಂದ ಮೂರು ಪಟ್ಟು ಹೆಚ್ಚು ವಯಸ್ಸಾಗಿರುವ ಪುರುಷರ ಜೊತೆ ಹೆಣ್ಣು ಮಕ್ಕಳ ಮದುವೆ ಮಾಡಲಾಗುತ್ತದೆ.

ಬೇರೆ ದೇಶಗಳಲ್ಲಿ ಈ ಅನಿಷ್ಠ ಪದ್ಧತಿ ಇಲ್ಲವೆಂದಲ್ಲ. ಆದ್ರೆ ಯೆಮೆನ್ ನಲ್ಲಿ ಇದೊಂದು ಸಂಪ್ರದಾಯವಾಗಿ ಬೆಳೆದು ಬಂದಿದೆ. ಅಲ್ಲಿ ಶೇಕಡಾ 80 ರಷ್ಟು ಮಂದಿ ಬಡವರಿದ್ದಾರೆ. ಅವರು ತಮ್ಮ ಹೆಣ್ಣು ಮಕ್ಕಳನ್ನು ಆದಷ್ಟು ಬೇಗ ಮದುವೆ ಮಾಡಿ ಕೈ ತೊಳೆದುಕೊಳ್ಳುತ್ತಾರೆ. ಹೀಗೆ ಮಾಡುವುದರಿಂದ ಪಾಲಕರಿಗೆ ಸಾಕಷ್ಟು ಹಣ ಕೂಡ ಸಿಗುತ್ತದೆ. ಬಾಲಕಿಯರು ಮಾತ್ರ ನರಕ ಅನುಭವಿಸಬೇಕಾಗುತ್ತದೆ.

ಯೆಮೆನ್ ನಲ್ಲಿ 15 ವರ್ಷಕ್ಕಿಂತ ಮೊದಲೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ. ಅತಿ ಕಡಿಮೆ ವಯಸ್ಸಿನಲ್ಲಿ ಬಾಲಕಿಯರು ತಾಯಿಯಾಗುತ್ತಿರುವುದರಿಂದ ಅಲ್ಲಿ ಬಾಲಕಿಯರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

2010ರಲ್ಲಿ ಕೂಡ ಮದುವೆ ರಾತ್ರಿ ಬಾಲಕಿಯೊಬ್ಬಳು ಸಾವನ್ನಪ್ಪಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ