ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.
ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.
ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.
ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…