ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ.
ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ ಚಕಿತರನ್ನಾಗಿಸುತ್ತವೆ. ಸದ್ಯ ಚೀನಾದಲ್ಲಿ ಒಂದು ಮೀನು ತುಂಬಾ ಅಚ್ಚರಿಗೆ ಕಾರಣವಾಗಿದೆ. ಕಾರಣ, ಈ ಮೀನಿನ ಮುಖ ಮನುಷ್ಯನ ಮುಖವನ್ನು ಹೋಲುತ್ತಿದೆ.
ದಕ್ಷಿಣ ಚೀನಾದ ಕುನ್ಮಿಂಗ್ ನಗರದ ಪ್ರವಾಸಿ ತಾಣವಾದ ಮಿಯಾವೋ ಗ್ರಾಮಕ್ಕೆ ಪ್ರವಾಸಿಗರೊಬ್ಬರು ಹೋಗಿದ್ದ ಸಂದರ್ಭದಲ್ಲಿ ಈ ಮೀನು ಕ್ಯಾಮೆರಾಕ್ಕೆ ಸೆರೆಯಾಗಿದೆ. ಈ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೀನಿಗೆ ಮನುಷ್ಯರಂತೆ ಮೂಗು, ಕಿವಿ ಬಾಯಿ ಇದ್ದಂತೆ ಗೋಚರಿಸುತ್ತದೆ.
ಸದ್ಯ 15 ಸೆಕೆಂಡಿನ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಕೆಲವರು ಈ ಮೀನನ್ನು ಕಂಡು ಅಚ್ಚರಿಗೊಳಗಾಗಿದ್ದರೆ, ಇನ್ನು ಕೆಲವರು ಈ ಮೀನನ್ನು ತಿನ್ನುವ ಧೈರ್ಯ ಯಾರಿಗೆ ಬರಬಹುದು ಎಂದು ಪ್ರಶ್ನಿಸಿದ್ದಾರೆ. ಈ ಮೀನಿನ ವಿಡಿಯೋ ನೋಡಿದಾಗ ನಿಜಕ್ಕೂ ಒಂದು ಕ್ಷಣ ನಾವೆಲ್ಲಾ ಬೆರಗಾಗುತ್ತೇವೆ… ನಮ್ಮ ಪ್ರಕೃತಿಯಲ್ಲಿ ಇಂತಹ ಇನ್ನೆಷ್ಟು ವೈಚಿತ್ರ್ಯಗಳು ಅಡಗಿವೆಯೋ… ಆ ಪ್ರಕೃತಿ ಮಾತೆಗೇಗೊತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…