ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…