ಸುದ್ದಿ

ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

158

ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ.

ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ ಬಳಿಯ ಕಡಲು ಸಂಪೂರ್ಣ ಕದಡಿಹೋಗಿದೆ.

ನದಿ ನೀರು ಸಮುದ್ರ ಸೇರುವ ಉಡುಪಿಯ ಪಡುಕೆರೆ, ಕೋಡಿ ಬೆಂಗ್ರೆ, ಗಂಗೊಳ್ಳಿ, ಪಡುಬಿದ್ರೆಯಲ್ಲಿ ಈ ದೃಶ್ಯ ಈಗ ಸಾಮಾನ್ಯವಾಗಿದೆ. ನಿಜವಾಗಿ ಸಮುದ್ರದ ತೀವ್ರತೆ ಮತ್ತು ಭೋರ್ಗರೆತ ಕಣ್ತುಂಬಿಕೊಳ್ಳಬೇಕಾದರೆ ಈಗ ಅರಬ್ಬೀ ಸಮುದ್ರವನ್ನು ನೋಡಬೇಕು.

ಮಾಮೂಲಿಯಾಗಿ ಸಮುದ್ರದ ನೀರು ತಿಳಿಯಾಗಿರುತ್ತದೆ. ನೀಲಿ ಬಣ್ಣದಲ್ಲಿ ಕಂಗೊಳಿಸುತ್ತದೆ. ಪಶ್ಚಿಮ ಘಟ್ಟದ ತಪ್ಪಲು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುಗಿರುವುದಿಂದ ಭಾರೀ ಪ್ರಮಾಣದ ನೀರು ಸಮುದ್ರದತ್ತ ಧುಮ್ಮುಕ್ಕುತ್ತಿದೆ. ಹೀಗಾಗಿ ಸಮುದ್ರ ಪುಡಿಯಾಗಿದೆ. ಹರಿಯುವ ನದಿ ಖನಿಜ, ಲವಣಾಂಶ, ಕೊಳೆತ ತರಗೆಲೆ, ಮರ, ಮಣ್ಣು ಎಲ್ಲವನ್ನೂ ತಂದಿದೆ. ಸಮುದ್ರದ ಉಪ್ಪು ನೀರಿನ ಜೊತೆ ನದಿಯ ಕೆನ್ನೀರು ಸೇರಿ ಕಡಲು ಬಣ್ಣ ಬದಲಿಸಿದೆ.

ನಿಜಾರ್ಥದ ಸಮುದ್ರ ನೋಡುವ ಮನಸ್ಸಿದ್ದವರು ಸಮುದ್ರದ ವೈಭವ ನೋಡುವ ಆಸೆಯಿರುವವರು ಈಗ ಉಡುಪಿಗೆ ಬರಬೇಕು. ಸಮುದ್ರಕ್ಕಿಳಿದು ಆಡುವ ಅವಕಾಶ ಇಲ್ಲದಿದ್ದರೂ ಕಡಲಿನ ಅಬ್ಬರವನ್ನು ಕಣ್ತುಂಬಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.