ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

167

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…