ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.
ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;
ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್‌ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….
ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…