ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಹೌದು, ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ ಉತ್ತಮ ಪ್ರಜಾ ಪಾರ್ಟಿ.‘ ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಸದಸ್ಯತ್ವ ನೀವು ಪಡೆದುಕೊಳ್ಳಬಹುದು..!
ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಇಲ್ಲಿ ಓದಿ:-ಉಪ್ಪಿಗೆ ಆಟೋ ಚಾಲಕ ಬರೆದ ಪತ್ರದಲ್ಲಿ ಏನಿತ್ತು ಗೊತ್ತಾ..?
ಕೆಲವು ದಿನಗಳ ಹಿಂದಷ್ಟೇ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿರುವ ಉಪೇಂದ್ರ ಅವರು ಬಿರುಸಿನ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಚಲನಚಿತ್ರಗಳಿಗೆ ಸಂಬಂಧಿಸಿದ ತಮ್ಮ ಎಲ್ಲ ಕೆಲಸಗಳನ್ನೂ ಶೀಘ್ರದಲ್ಲೇ ಮುಗಿಸಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿರುವ ಉಪೇಂದ್ರ ಅವರು ಅಗತ್ಯ ಕಂಡು ಬಂದರೆ ರಾಜ್ಯದ ವಿವಿಧ ನಗರಗಳಿಗೂ ತೆರಳಿ ಪಕ್ಷ ಸ್ಥಾಪನೆಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಜತೆಗೆ ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸ್ವೀಕರಿಸುವುದೂ ಸೇರಿದಂತೆ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪರಿಶೀಲಿಸಿ ಮುಂದಿನ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.