ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ.

ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು ಚೆಕ್ ಮಾಡೋದಿಲ್ಲ. ಈಗಾಗಿ ಎಲೆಕ್ಷನ್ ಬರುತ್ತಲೇ ಆಂಬುಲೆನ್ಸ್’ಗಳಲ್ಲಿ ಹಣದ ಸಾಗಾಟ ಹೆಚ್ಚಾಗುತ್ತದೆ.ಹಾಗಾಗಿ ಪೊಲೀಸರಿಗೆ ಕಣ್ಣು ತಪ್ಪಿಸಿ ಮಾಡುವ ಇಂತಹ ಎಲ್ಲಾ ಅಕ್ರಮ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಇನ್ನೇನು ಕೆಲವೇ ವಾರಗಳಲ್ಲಿ ಎಲೆಕ್ಷನ್ ನಡೆಯುವುದರಿಂದ ಆಂಬುಲೆನ್ಸ್ ನಲ್ಲಿ ಕೂಡ ದುಡ್ಡು ಸಾಗಿಸೋ ಸಾಧ್ಯತೆ ಇರೋದ್ರಿಂದ ಈಗ ಇದಕ್ಕೆ ಬ್ರೇಕ್ ಹಾಕೋದಕ್ಕೆ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಅಯುಕ್ತೆ ರೂಪಾ ಮುಂದಾಗಿದ್ದಾರೆ.

ಎಮರ್ಜೆನ್ಸಿ ಕೇಸ್ಗಳಿಗೆ ರೆಡ್ ಲೈಟ್ ಮತ್ತು ಲಾಂಗ್ ಸೈರನ್ ಇದ್ರೆ, ನಾರ್ಮಲ್ ಕೇಸ್ಗಳಾದ್ರೆ ನೀಲಿ ಬಣ್ಣದ ಲೈಟ್ ಹಾಗೂ ಸಪರೇಟ್ ಸೈರನ್ ನೀಡಲು ಚಿಂತನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆಂಬುಲೆನ್ಸ್ ಗಳನ್ನ ಕೆಲವು ಸಂದರ್ಭದಲ್ಲಿ ಚೆಕ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೂ ಸೂಚನೆ ನೀಡಿದ್ದಾರೆ.

ಟ್ರಾಫಿಕ್ನಲ್ಲಿ ತುರ್ತು ಸಮಯದಲ್ಲಿ ಪ್ರಾಣ ಹೋಗುವುದನ್ನು ತಡೆಯಲು ಹಾಗೂ ಆಂಬುಲೆನ್ಸ್ ಮಿಸ್ ಯೂಸ್ ಆಗದಂತೆ ತಡೆಯಲು ಈ ನಿರ್ಧಾರವನ್ನು ಮಾಡಲಾಗಿದೆ ಎಂಬುದಾಗಿ ತಿಳಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…