ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು.
ರಕ್ತದೊತ್ತಡ ಈಗ ಸಾಮಾನ್ಯ ಸಮಸ್ಯೆಯಾಗಿದೆ. ಇದ್ರಿಂದ ಹೃದಯಾಘಾತ, ಸ್ಟ್ರೋಕ್ ಕಾಣಿಸಿಕೊಳ್ಳುತ್ತದೆ. ತಾಜಾ ಎಳನೀರು ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಅದ್ರಲ್ಲಿರುವ ಪೋಟ್ಯಾಸಿಯಮ್ ಹಾಗೂ ಮೆಗ್ನೀಸಿಯಂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಎಳನೀರಿನಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಹೃದಯವನ್ನು ರಕ್ಷಿಸುತ್ತದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಇದು ಹೇಳಿ ಮಾಡಿಸಿದ ಮದ್ದು. ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ ಚಯಾಪಚಯವನ್ನು ಆರೋಗ್ಯವಾಗಿರಿಸುತ್ತದೆ.
ಎಳನೀರಿನಲ್ಲಿ ಪ್ರೋಟೀನ್ ಹಾಗೂ ಫೈಬರ್ ಅಂಶವಿರುತ್ತದೆ. ಮಧುಮೇಹಿಗಳು ಇದನ್ನು ಕುಡಿಯಬಹುದಾಗಿದೆ. ಮಧುಮೇಹಿಗಳನ್ನು ಕಾಡುವ ಅನೇಕ ಸಮಸ್ಯೆಗಳನ್ನು ಇದು ಕಡಿಮೆ ಮಾಡುವ ಗುಣ ಹೊಂದಿದೆ.
ಎಳನೀರಿನಲ್ಲಿ ಆಂಟಿಆಕ್ಸಿಡೆಂಟ್ ಇರುತ್ತದೆ. ಇದು ದೇಹವನ್ನು ರೋಗ ಮುಕ್ತ ಮಾಡುವ ಜೊತೆಗೆ ಚರ್ಮದ ಕಾಂತಿ ಹೆಚ್ಚಲು ನೆರವಾಗುತ್ತದೆ. ಚರ್ಮದ ಮೇಲೆ ಕಾಣಿಸಿಕೊಳ್ಳುವ ಸುಕ್ಕು ಮಾಯವಾಗಿ ಚರ್ಮ ಮೃದು ಹಾಗೂ ನಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…