ರಾಜಕೀಯ

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ……

137

ಪರಿಶಿಷ್ಟ  ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಇದಕ್ಕಾಗಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ  ನಿರ್ಧರಿಸಲಾಯಿತು.

ಈ ಮುನ್ನ  ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ ಪಾಸ್‌ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್‌ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.

ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್‌ ಪಾಸ್‌ ನೀಡಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.

2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.

ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್‌ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…