ಸುದ್ದಿ

ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

49

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.

ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.

ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.

ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…