ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…