ಸೌಂದರ್ಯ

ಕಣ್ಣಿನ ಕಪ್ಪು ವರ್ತುಲಗಳಿಂದ ಕಿರಿಕಿರಿ ಆಗುತ್ತಿದೆಯೇ?ಹಾಗಾದ್ರೆ ಈ ಲೇಖನಿ ಓದಿ…

999

ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.

ಕಣ್ಣಿನ ಸುತ್ತ ಉಂಟಾಗುವ ಕಪ್ಪು ವರ್ತುಲಗಳು ಮುಖದ ಸೌಂದರ್ಯ ಹಾಳು ಮಾಡುತ್ತವೆ ಹಾಗೂ ಕಿರಿ ಕಿರಿ ಕೂಡ. ಮೇಕಪ್‌ನಿಂದ ಇವುಗಳನ್ನು ಮುಚ್ಚಿದರೆ ಅದು ತಾತ್ಕಾಲಿಕ ಉಪಶಮನವಷ್ಟೇ ಆಗಬಲ್ಲದು. ‘ಕಪ್ಪು ವರ್ತುಲಗಳಿಂದ ಶಾಶ್ವತ ಮುಕ್ತಿ ಪಡೆಯಲು ಸಾಧ್ಯವಿಲ್ಲವೇ ಅಂತ ನಿಮ್ಗೆ ಅನ್ನಿಸಬಹುದು.

ಇದಕ್ಕೆ ಮುಖ್ಯ ಕಾರಣಗಳು:-
ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು.

ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ತಂದುಕೊಳ್ಳುವುದು ಬಹಳ ಮುಖ್ಯ.

ಕಪ್ಪು ವರ್ತುಲಗಳು ಗಂಭೀರ ಸಮಸ್ಯೆಯಲ್ಲ. ಮನೆಯಲ್ಲೇ ಗೃಹೌಷಧಿಗಳಿಂದ ಕಪ್ಪು ವರ್ತುಲಗಳನ್ನು ನಿವಾರಣೆ ಮಾಡಿ ಮೊಗದ ಸೌಂದರ್ಯ ಮತ್ತು ಆರೋಗ್ಯವನ್ನು ವರ್ಧಿಸಬಹುದು.

  • ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
  • ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
  • ಆಯಾ ಕಾಲದಲ್ಲಿ ಸಿಗುವ ಹಣ್ಣುಗಳನ್ನು ಸೇವಿಸಿ.
  • ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
  • ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
  • ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.
  • ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.

  • ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
  • ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.