ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್‌ನಲ್ಲೂ ಬರಲಿ:-
ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.