ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-
1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-
ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-
ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-
ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-
ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್‌ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-
ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-
ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.