ತಂತ್ರಜ್ಞಾನ

ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

1108

ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

ಈ ಒಪ್ಪಂದದ ಪ್ರಕಾರ, ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಹೊಸೂರುಗಳಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೋಧನೆ ಮಾಡುವುದಲ್ಲದೇ, ಆರ್ಥಿಕವಾಗಿಯೂ ಇದು ಪ್ರಯೋಜನಕ್ಕೆ ತರುತ್ತದೆಯೇ ಎಂಬ ಬಗ್ಗೆಯೂ ಅಧ್ಯಯನ ನಡೆಸಲಿದೆ.

ಒಂದೊಮ್ಮೆ ಈ ಯೋಜನೆ ಜಾರಿಯಾಗಲು ಅರ್ಹವೆಂದು ಕಂಡುಬಂದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವೇಗ ಕೇವಲ ಅರ್ಧಗಂಟೆಗೆ ಇಳಿಯಲಿದೆ. ಅಂದರೆ, ವಿಮಾನ ಪ್ರಯಾಣಕ್ಕಿಂತಲೂ ಕಡಿಮೆ ಸಮಯದಲ್ಲಿ ಈ ನಗರಗಳ ನಡುವೆ ಸಂಚಾರ ಮಾಡಬಹುದಾಗಿದೆ.

ಒಪ್ಪಂದದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, “”ಬೆಂಗಳೂರು ಐಟಿ ಹಬ್‌ ಆಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಜಗತ್ತಿನ ಅತ್ಯಂತ ಪ್ರಮುಖ ಐಟಿ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಒಂದು ವೇಳೆ ಹೈಪರ್‌ಲೂಪ್‌ನಂಥ ನವ ತಂತ್ರಜ್ಞಾನವನ್ನು ರಾಜ್ಯದಲ್ಲಿ ಅಳವಡಿಸಿದ್ದೇ ಆದರೆ, ಕರ್ನಾಟಕದ ಪ್ರಗತಿಯ ವೇಗ ಮತ್ತಷ್ಟು ಹೆಚ್ಚುತ್ತದೆ,” ಎಂದಿದ್ದಾರೆ.

ಹೈಪರ್‌ಲೂಪ್‌ ಯೋಜನೆಗಾಗಿ ಕೇವಲ ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳೂ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿವೆ. ಈ ಕಂಪನಿ ಪ್ರಾಥಮಿಕವಾಗಿ ಸ್ಥಳ ಮತ್ತು ಯೋಜನೆಯ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲಿದೆ.

 

ಏನಿದು ಹೈಪರ್‌ಲೂಪ್‌?
ವಿಶೇಷವಾಗಿ ನಿರ್ಮಿಸಲಾದ ಕೊಳವೆಯೊಂದರಲ್ಲಿ ಪಾಡ್‌(ಪುಟ್ಟ ವಾಹನಗಳು)ಗಳು ಸಾಗುವಂತೆ ಮಾಡುವುದು. ಈ ಕೊಳವೆಯನ್ನು ನೆಲದಿಂದ ಕೊಂಚ ಮೇಲೆಯೇ ನಿರ್ಮಿಸಲಾಗಿರುತ್ತದೆ. ಅಯಸ್ಕಾಂತೀಯ ಗುಣದೊಂದಿಗೆ ಈ ಕೊಳವೆಯ ಯಾವುದೇ ಬದಿಗೂ ಪಾಡ್‌ ತಗುಲದಂತೆ ಮಾಡಲಾಗುತ್ತದೆ.

ಇನ್ನೂ ವಿಶೇಷವೆಂದರೆ, ಈ ಕೊಳವೆಗೆ ಹೊರಗಿನಿಂದ ಗಾಳಿ ಹೋಗದಂತೆ ನಿರ್ಮಿಸಲಾಗುತ್ತದೆ. ಅಲ್ಲದೆ, ಇದೇ ಕಾಂತೀಯ ಶಕ್ತಿಯಿಂದಲೇ ಇದನ್ನು ಚಲಿಸುವಂತೆ ಮಾಡಲಾಗುತ್ತದೆ. ಆರಂಭದಲ್ಲಿ ಗಂಟೆಗೆ 640 ಕಿ.ಮೀ. ವೇಗ ಎಂದು ಹೇಳಲಾಗಿತ್ತಾದರೂ, ಇದೀಗ ಪ್ರಯೋಗ ಯಶಸ್ವಿಯಾದ ಬಳಿಕ ಗಂಟೆಗೆ ಒಂದು ಸಾವಿರ ಕಿ.ಮೀ. ವೇಗವಾಗಿ ಹೋಗಬಹುದು ಎಂದು ಹೇಳಲಾಗುತ್ತಿದೆ.

ಎಲ್ಲೆಲ್ಲಿ ಯೋಜನೆ?


ಅಮೆರಿಕ, ಬ್ರಿಟನ್‌, ಕೆನಡಾ, ಯುಎಇ, ಫಿನ್ಲಂಡ್‌ ಮತ್ತು ಭಾರತ. ಭಾರತದಲ್ಲಿ ಬೆಂಗಳೂರು, ತುಮಕೂರು, ಹೊಸೂರು, ಹುಬ್ಬಳ್ಳಿ, ಮುಂಬೈ, ಪುಣೆ ನಗರಗಳಲ್ಲಿ ಯೋಜನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…