ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು.

ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ. ತಕ್ಷಣ ಅವತನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಇನ್ನುಳಿದ ಮಹಿಳೆಯರೂ ಕೂಡ ತೀವ್ರ ಅಸ್ವಸ್ಥಗೊಂಡಾಗ ಕೆಲವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಯಿತು.

ವೈದ್ಯರಾದಡ ಆ.ನವೀನ್, ಡಾ.ಗಣೇಶ್ ಬಾಬು ಪ್ರಥಮ ಚಿಕಿತ್ಸೆ ನೀಡಿ ಅಪಾಯದಿಂದ ಪಾರು ಮಾಡಿದರು. ನಂತರ ತಾಲ್ಲೂಕು ವೈದ್ಯಾಧಿಕಾರಿ ಕಾರ್ಖಾನೆಯ ಕ್ಯಾಂಟೀನ್ ಪರಿಶೀಲಿಸಿದಾಗ ಆಹಾರ ತಯಾರಿಕೆಗೆ ಕಲುಷಿತ ನೀರು ಬಳಸಿರುವುದೇ ಪ್ರಮುಖ ಕಾರಣವಾಗಿದ್ದು, ಕ್ಯಾಂಟೀನ್ ಸ್ವಚ್ಛತೆ ಹಾಗೂ ಸುರಕ್ಷತೆ ಇಲ್ಲದಿರುವುದು ಕಂಡುಬಂದಿತು.

ಈ ಸಂಬಂಧ ಕಾರ್ಖಾನೆ ಹಾಗೂ ಕ್ಯಾಂಟೀನ್ ಮಾಲೀಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವೈದ್ಯಾಧಿಕಾರಿಗಳ ಮಂದಿ ಬಂದ ನಂತರ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…