ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….