ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…