ಕಾನೂನು

ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

1734

ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು. ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ‘ಸುಕನ್ಯಾ ಸಮೃದ್ಧಿ’ ಉಳಿತಾಯ ಖಾತೆಯನ್ನು ತೆರೆಯಬಹುದಾಗಿದೆ.

ಈ ಖಾತೆ ಆರಂಭಗೊಂಡ ದಿನದಿಂದ 21 ವರ್ಷಗಳವರೆಗೆ ಚಾಲ್ತಿಯಲ್ಲಿ ಇರುತ್ತದೆ. ಯಾರು ಖಾತೆ ತೆರೆಯಬಹುದು : ಸರ್ಕಾರಿ ಮತ್ತು ಖಾಸಗಿ ವಾಣಿಜ್ಯೋದ್ಯಮ ಸಂಸ್ಥೆಗಳ ನೌಕರರು, ವ್ಯಾಪಾರ, ಸ್ವಂತ ಉದ್ದಿಮೆ ಸೇರಿದಂತೆ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದು.


ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ಖಾತೆ ತೆರೆಯುವ ಸಂದರ್ಭದಲ್ಲಿ ಮಗುವಿನ ಜನನ ಪ್ರಮಾಣ ಪತ್ರ, ಪೋಷಕರ ಗುರುತಿನ ಚೀಟಿ, ವಿಳಾಸ ದೃಢೀಕರಣ ದಾಖಲೆಗಳು ಅಗತ್ಯವಾಗಿವೆ
21 ವರ್ಷ ಖಾತೆ ಇರುತ್ತದೆ .ಇದೊಂದು ದೀರ್ಘಕಾಲಿನ ಉಳಿತಾಯ ಖಾತೆಯಾಗಿದೆ. ಸುಕನ್ಯಾ ಸಮೃದ್ಧಿ ಉಳಿತಾಯ ಖಾತೆಯು ಆರಂಭಗೊಂಡ ದಿನದಿಂದ 21 ವರ್ಷದವರೆಗೂ ಚಾಲ್ತಿಯಲ್ಲಿರುತ್ತದೆ. ಯಾವ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಲಾಗಿದೆಯೋ ಆಕೆಗೆ 18 ವರ್ಷ ಪೂರ್ಣಗೊಂಡ ನಂತರ, ಆಕೆಯು ತನ್ನ ಖಾತೆಯಲ್ಲಿ ಜಮಾ ಆದ ಹಣದಲ್ಲಿ ಅರ್ಧ ಭಾಗವನ್ನು ಉನ್ನತ ಶಿಕ್ಷಣ, ಮದುವೆಯ ಉದ್ದೇಶಕ್ಕೆ ಬಳಸಬಹುದು.

ವರ್ಗಾವಣೆಗೆ ಮಾಡಿಸಿಕೊಳ್ಳಬಹುದು :- ನೀವು ಖಾತೆ ತೆರೆದ ಊರಿನಿಂದ ಬೇರೆ ಊರಿಗೆ ವರ್ಗಾವಣೆಗೊಂಡರೆ ಖಾತೆಯನ್ನು ಆ ಊರಿಗೆ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಡಿ ಸಮೀಪದ ಅಂಚೆ ಕಚೇರಿಗಳಲ್ಲಿ ಖಾತೆ ತೆರೆಯಬಹುದಾಗಿದೆ. ಯೋಜನೆಯ ಎಲ್ಲಾ ಮಾಹಿತಿ ಅಂಚೆ ಕಚೇರಿಗಳಲ್ಲಿ ಲಭ್ಯವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ