ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.
ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್ ಸ್ವೀಕರಿಸುತ್ತಾನೆ.
ಚಾಲೆಂಜ್ ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.
ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.