ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.

ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…