ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.
ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….