ಸುದ್ದಿ

ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

66

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್​ಸೆಟ್​ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್​ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ವಿಚಿತ್ರ ಆದರೂ ಸತ್ಯ

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

    ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…