ಉಪಯುಕ್ತ ಮಾಹಿತಿ

ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

226

ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು.

ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ…

ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.

ಕೊಬ್ಬು ಕರಗಿಸಲು ನೆರವಾಗುತ್ತದೆ :-

ಹಸಿರು ಟೀ ನಮ್ಮ ಪಚನಕ್ರಿಯೆ ಮತ್ತು ಜೀವರಾಸಾಯನಿಕ ಕ್ರಿಯೆಯನ್ನು ಸರಿಸುಮಾರು ಶೇಖಡಾ ನಾಲ್ಕರಷ್ಟು ಹೆಚ್ಚಿಸುತ್ತದೆ. ಈ ಹೆಚ್ಚುವರಿ ಕೆಲಸವನ್ನು ಪೂರೈಸಲು ದೇಹದಲ್ಲಿ ಶೇಖರವಾಗಿದ್ದ ಕೊಬ್ಬನ್ನು ಬಳಸಬೇಕಾಗಿ ಬರುತ್ತದೆ. ನಿತ್ಯದ ಹಸಿರು ಟೀ ಸೇವನೆಯಿಂದ ನಿಧಾನವಾಗಿಯಾದರೂ ಆರೋಗ್ಯಕರವಾಗಿ ಕೊಬ್ಬು ಕರಗುತ್ತದೆ.

ಕ್ಯಾನ್ಸರ್ ಬರದಂತೆ ತಡೆಯುತ್ತದೆ:-

ನಮ್ಮ ದೇಹದ ಎಲ್ಲಾ ಅಂಗಗಳ ಬೆಳವಣಿಗೆಗೆ ಒಂದು ಮಿತಿಯಿದೆ. ಆದರೆ ಕೆಲವು ಕೋಶಗಳು ಅನಿಯಂತ್ರಿತವಾಗಿ ಬೆಳವಣಿಗೆಯಾಗುವ ಮೂಲಕ ಕ್ಯಾನ್ಸರ್ ರೋಗವನ್ನು ಹುಟ್ಟುಹಾಕುತ್ತವೆ. ಈ ಬೆಳವಣಿಗೆಗೆ ಫ್ರೀ ರ್‍ಯಾಡಿಕಲ್ ಎಂಬ ಕಣಗಳು ಕಾರಣವೆಂದು ಇತ್ತೀಚೆಗೆ ತಿಳಿದುಬಂದಿದೆ. ಹಸಿರು ಟೀ ಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ಈ ಕಣಗಳನ್ನು ಹಿಮ್ಮೆಟ್ಟಿಸಿ ಕ್ಯಾನ್ಸ್ರರ್ ತಗಲುವ ಸಂಭವವನ್ನು ಕಡಿಮೆಗೊಳಿಸುತ್ತವೆ.ವಿಶೇಷವಾಗಿ ಸ್ತನಕ್ಯಾನ್ಸರ್, ಕರುಳು ಕ್ಯಾನ್ಸರ್ ಮತ್ತು ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ಬರದಂತೆ ಸಮರ್ಥವಾಗಿ ತಡೆಯುತ್ತದೆ ಎಂದು ತಿಳಿದುಬಂದಿದೆ.

ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ:-

ನಮ್ಮ ದೇಹದಲ್ಲಿ ಯಾವುದೋ ಮಾಯೆಯಿಂದ ಒಳಪ್ರವೇಶಿಸಿ ವಿಶೇಷವಾಗಿ ಹಲ್ಲು ಮತ್ತು ಗಂಟಲಿನೊಳಗೆ ಮನೆ ಮಾಡಿಕೊಂಡು ಹಬ್ಬ ಆಚರಿಸುತ್ತಿರುವ ವಿವಿಧ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿಯೂ ಹಸಿರು ಟೀ ಮಹತ್ವದ ಪಾತ್ರ ವಹಿಸುತ್ತದೆ.

ತಲೆನೋವನ್ನು ನಿವಾರಿಸಲು:-

ಹಸಿರು ಚಹಾ (ಗ್ರೀನ್ ಟೀ) ಯಲ್ಲಿ ಒಂದು ನಿರ್ಧಾರಿತ ಪ್ರಮಾಣದ ಕೆಫೀನ್ ಇದ್ದು ಇದು ಎಲ್ಲಾ ತರಹದ ತಲೆನೋವುಗಳನ್ನು ನಿವಾರಿಸಲು ಅತ್ಯಂತ ಸೂಕ್ತವಾದ ಪ್ರಮಾಣವಾಗಿದೆ. ಹಸಿರು ಟೀಯಲ್ಲಿ ಹಾಲಿಲ್ಲದೇ ಕೊಂಚವೇ ಸಕ್ಕರೆ ಸೇರಿಸಿ ಕುಡಿಯಬಹುದು ಅಥವಾ ಕೊಂಚ ಲಿಂಬೆರಸ ಸೇರಿಸುವುದರಿಂದ ರುಚಿ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆಯೂ ಹೆಚ್ಚುತ್ತದೆ.

ಚರ್ಮದ ಕಾಂತಿ ಹೆಚ್ಚಿಸಲು:-

ಒಂದು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಲಿಂಬೆಹಣ್ಣಿನ ರಸ ಸೇರಿಸಿ. (ಈಗ ತಾನೇ ಹಿಂಡಿದ ಲಿಂಬೆರಸ). ಇದಕ್ಕೆ ಒಂದರಿಂದ ಎರಡು ಚಿಕ್ಕ ಚಮಚ ಹಸಿರು ಟೀ ಕುದಿಸಿ ಸೋಸಿದ ನೀರನ್ನು ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ನಯವಾಗಿ ಒಮ್ಮುಖವಾಗಿ ಹಚ್ಚಿರಿ. ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…