ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರುವ ಚಿಕ್ಕಣ್ಣ ಯಶ್ ನಟನೆಯ ರಾಜಾ ಹುಲಿ ಮತ್ತು ಶರಣ್ ನಟನೆಯ ಅಧ್ಯಕ್ಷ ಸಿನಿಮಾಗಳ ಅಭಿನಯಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು, ಸದ್ಯ ಹೀರೋ ಆಗಿ ಚಾಲೆಂಜ್ ಸ್ವೀಕರಿಸಿದ್ದಾರೆ,

ಚಿಕ್ಕಣ್ಣ ಅವರ ಅವರು ತೆರೆಯ ಮೇಲೆ ಬಂದರೆ ನಗುವಿಗೆ ಕೊರೆತಯಿರುವುದಿಲ್ಲ, ಅವರು ಹೀರೋ ಆಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಹಾಸ್ಯದ ಜೊತೆಗೆ ಹೀರೋ ಪಾತ್ರವನ್ನು ನಿಭಾಯಿಸುತ್ತಿದ್ದಾರೆ ಎಂದು ನಿರ್ದೇಶಕ ತಿಳಿಸಿದ್ದಾರೆ, ಅಕ್ಟೋಬರ್ ತಿಂಗಳಲ್ಲಿ ಸೆಟ್ಟೇರಲಿದೆ, ಇದರ ಜೊತೆಗೆ ಭರತ ಬಾಹುಬಲಿ ಸಿನಿಮಾ ಬಗ್ಗೆಯೂ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಕನ್ನಡ ಸಿನಿಮಾದಲ್ಲಿ ಹಾಸ್ಯನಟರಾಗಿದ್ದವರು ನಾಯಕ ನಟರಾಗಿ ಬದಲಾಗಿ ಯಶಸ್ವಿಯಾಗಿರುವುದಕ್ಕೆ ಶರಣ್ ಸಾಕ್ಷಿಯಾಗಿದ್ದಾರೆ, ಶರಣ್ ರ್ಯಾಂಬೋ ನಾಯಕನಾಗಿ ಪಯಣ ಆರಂಭಿಸಿದರು, ಜೊತೆಗೆ ಕೋಮಲ್ ಕೂಡ ನಾಯಕನಾಗಿ ಯಶಸ್ವಿಯಾದವರು, ಚಿಕ್ಕಣ್ಣ ಕೂಡ ಹೀರೋ ಆಗಿ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…