ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟ್‌ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್‌ಕಾಯಿನ್‌ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್ ವ್ಯಾಲೆಟ್‌ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ
ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್‌ನೆಟ್ ಮೂಲಕ ನಡೆಯುತ್ತದೆ. ಬಿಟ್‌ಕಾಯಿನ್‌ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.
ಬಿಟ್‌ಕಾಯಿನ್ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್‌ಕಾಯಿನ್ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್‌ಕಾಯಿನ್ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್‌ಕಾಯಿನ್ ಅನ್ನು ಯಾವುದೇ ಬ್ಯಾಂಕ್ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್‌ಕಾಯಿನ್ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್‌ಕಾಯಿನ್‌ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.
ಬಿಟ್‌ಕಾಯಿನ್ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ ಬಿಟ್‌ಕಾಯಿನ್ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್‌ಕಾಯಿನ್ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್‌ಕಾಯಿನ್‌ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್‌ಕಾಯಿನ್ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್ ಎಂದೇ ಹೆಸರು. ಈಚೆಗೆ ಬಿಟ್‌ಕಾಯಿನ್ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್‌ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.
ಇತ್ತೀಚೆಗೆ ಒಂದು ಬಿಟ್‌ಕಾಯಿನ್‌ನ ಬೆಲೆ 10,000 ಡಾಲರ್‌ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!
ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…
ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್‌ಪ್ರೆಸ್, ರೆಡಿಟ್, ನೇಮ್‌ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್‌ಲೈನ್ ತಾಣಗಳು ಬಿಟ್‌ಕಾಯಿನ್‌ಗಳನ್ನು ನೇರವಾಗಿ ಸ್ವೀಕರಿಸುತ್ತವೆ.
ಬಿಟ್‌ಕಾಯಿನ್‌ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್‌ಕಾಯಿನ್‌ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.
ಈಗ ಬೇರೊಬ್ಬರ ಬಿಟ್‌ಕಾಯಿನ್‌ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್‌ಕಾಯಿನ್‌ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್‌ಕಾಯಿನ್ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್‌ಕಾಯಿನ್‌ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.
ಈ ಡಿಜಿಟಲ್ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್‌ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್‌ಕಾಯಿನ್ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.
ಸದ್ಯ ಬಿಟ್‌ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್‌ಕಾಯಿನ್ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.