ರಾಜಕೀಯ

ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

36

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ


ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

 
ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.


ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….