ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ.

ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ.

ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ ಜೊತೆ ಮಧ್ಯಪ್ರದೇಶದ ಹೋಷಂಗಾಬಾದ್ ಎಂಬಲ್ಲಿನ ‘ಸತ್ಪುರ ಟೈಗರ್ ರಿಸರ್ವ್’ಗೆ ಹೋಗಿದ್ದರು.ಈ ವೇಳೆ ಹುಲಿಯೊಂದು ಏಕಾಏಕಿ ಪೊದೆಯೊಳಗಿಂದ ಪ್ರತ್ಯಕ್ಷವಾಗಿ, ಗಣತಿಗೆಂದು ಬಂದಿದ್ದವರ ಮುಂದೆ ಘರ್ಜಿಸಲು ಆರಂಭಿಸಿತು.ಹುಲಿ ಮತ್ತು ಇವರ ನಡುವೆ ಕೇವಲ 10 ಮೀಟರ್ ಅಂತರವಿತ್ತು.

ಹುಲಿಯ ಘರ್ಜನೆ ಕೇಳಿದ್ದೇ ತಡ ಇಬ್ಬರೂ ಪುರುಷ ಗಾರ್ಡ್ಗಳು ತತ್ತರಿಸಿ ಹೋಗಿದ್ದರು.ಆಗ ಈಕೆ ತನ್ನ ಸಹೋದ್ಯೋಗಿಗಳಿಬ್ಬರಿಗೆ ಒಂದಿಂಚೂ ಕದಲದೇ ನಿಲ್ಲಿ ಎಂದಿದ್ದಾಳೆ. ಜೊತೆಗೆ ತಾನೂ ಕದಲದೇ ಹುಲಿಯನ್ನೇ ದಿಟ್ಟಿಸಿದ್ದಾಳೆ.

ಹೀಗೆ ಒಂದೆರಡು ನಿಮಿಷವಲ್ಲ, ಒಂದೂವರೆ ಗಂಟೆ ಕಳೆದ ಇವರು ಕೊನೆಗೂ ಹುಲಿಯನ್ನು ಹಾಗೆ ದಿಟ್ಟಿಸಿಯೇ ಹಿಮ್ಮೆಟ್ಟಿಸಿದ್ದಾರೆ.ಈ ಘಟನೆಯಿಂದ ಬೆಚ್ಚಿದ ಹುಲಿ, ಒಂದೂವರೆ ಗಂಟೆಗಳ ಬಳಿಕ ಸುಮ್ಮನೆ, ಮತ್ತೆ ಕಾಡಿನೊಳಗೆ ಸೇರಿಕೊಂಡಿತು.
ಮಹಿಳಾ ಅಧಿಕಾರಿಯ ಈ ಧೈರ್ಯ ಆಕೆಯ ಸಮಯಪ್ರಜ್ಞೆ ಹಾಗೂ ಸಾಮಾನ್ಯ ಜ್ಞಾನದಿಂದ ಮೂವರ ಪ್ರಾಣ ಕಾಪಾಡಿದೆ.ಮಹಿಳಾ ಅಧಿಕಾರಿಯ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…