ಸುದ್ದಿ

ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

35

ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ…

ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ ಅನಧಿಕೃತ ಪ್ರವೇಶವನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮವನ್ನು ಜಾರಿಗೆ ತಂದಿರುವುದಾಗಿ ಇಲಾಖೆ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಇಲಾಖೆಯ ಸೂಪರಿಂಟೆಂಟ್ ಬಸಂತ್ ಕುಮಾರ್ ಅವರು, ತಾಜ್ ಮಹಲ್ ನಲ್ಲಿ ಈ ಹಿಂದೆ ಪ್ರವಾಸಿಗರು ಬೆಳಗ್ಗಿನಿಂದ ಸಂಜೆಯವರೆಗೂ ಸಮಯ ಕಳೆಯಬಹುದಿತ್ತು. ಆದರೆ ಈ ವೇಳೆ ತಾಜ್ ಮಹಲ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತಿತ್ತು. ಅಲ್ಲದೆ ಅನಧಿಕೃತವಾಗಿ ಪ್ರವೇಶದ ಅವಕಾಶವೂ ಇತ್ತು. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆತರಲಾಗಿದೆ. ಹೊಸ ನಿಯಮದ ಅನ್ವಯ ಪ್ರವಾಸಿಗರು ತಾಜ್ ಮಹಲ್ ನಲ್ಲಿ 3 ಗಂಟೆಗಳನ್ನು ಮಾತ್ರ ಕಳೆಯಬಹುದು. 3 ಗಂಟೆಗೂ ಅಧಿಕ ಸಮಯದ ಬಳಿಕ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಟರ್ನ್ ಸ್ಟೈಲ್ ಗೇಟ್ ಗಳನ್ನು ಪರಿಚಯಿಲಾಗುತ್ತಿದ್ದು, ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಇವುಗಳನ್ನು ಅಳವಡಿಸಲಾಗುತ್ತದೆ. 7 ಗೇಟ್ ಗಳ ಪೈಕಿ 5 ಗೇಟ್ ಗಳು ಎಕ್ಸಿಟ್ ಗೆ ಮೀಸಲಿಡಲಾಗುತ್ತದೆ. ವಿದೇಶಿಗರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ಗಳು ಇರಲಿದ್ದು, ಟೋಕನ್ ಗಳ ಮೂಲಕವಷ್ಟೇ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ನಿಯಮಕ್ಕೆ ಪ್ರವಾಸಿಗರ ತೀವ್ರ ವಿರೋಧ , ಇನ್ನು ಪುರಾತತ್ವ ಇಲಾಖೆಯ ಹೊಸ ನಿಯಮಕ್ಕೆ ಪ್ರವಾಸಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ನಾವು ತಾಜ್ ಮಹಲ್ ಸಮಯ ಕಳೆಯಲು ಬರುತ್ತೇವೆ. ಆದರೆ ಪುರಾತತ್ವ ಇಲಾಖೆಯ ಈ ನಿಯಮಗಳಿಂದ ಪ್ರವಾಸಿಗರು ತಾಜ್ ಮಹಲ್ ನಿಂದ ವಿಮುಖರಾಗುವ ಅಪಾಯವಿದೆ. ಕೇವಲ ಮೂರು ಗಂಟೆ ಮಾತ್ರ ಸಮಯಾವಕಾಶ ವಿಧಿಸಿದರೆ ತಾಜ್ ಮಹಲ್ ಗೆ ಆಗಮಿಸಲೂ ಕೂಡ ಪ್ರವಾಸಿಗರು ಎರಡೆರಡು ಬಾರಿ ಯೋಚಿಸುತ್ತಾರೆ. ಇದು ನಿಜಕ್ಕೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಅಸ್ಟ್ರೇಲಿಯಾ ಮೂಲದ ಸೆಲಿನಾ ಎಂಬ ಪ್ರವಾಸಿಗರೂ ಕೂಡ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಭಾರತೀಯ ಪ್ರವಾಸಗರಿಗಿಂತ ವಿದೇಶಗರಿಗೆ ಬಹುತೇಕ 10 ಪಟ್ಟು ಹೆಚ್ಚು ಶುಲ್ಕು ವಿಧಿಸುತ್ತಿದ್ದಾರೆ. ಅದಾಗ್ಯೂ ನಾವು ಇಲ್ಲಿಗೆ ಬರುತ್ತಿದ್ದೇವೆ. ಆದರೆ ಇದೀಗ ಸಮಯದ ಮಿತಿ ವಿಧಿಸಿರುವುದು ನಾವು ಮತ್ತೆ ತಾಜ್ ಮಹಲ್ ಗೆ ಭೇಟಿ ನೀಡಬೇಕೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸ್ಪೂರ್ತಿ

    ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

    ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.