ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ.
ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ ರಸ್ತೆ ನಿರ್ಮಿಸುವ ಮೂಲಕ ತ್ಯಾಜ್ಯ ನಿರ್ವಹಣೆಯ ಹೊಸ ಯೋಜನೆಗೆ ಮಾದರಿಯಾಗಿತ್ತು. ಇದೀಗ ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ನಗರ ಕಸ ಕೊಡಿ ಆಹಾರ ಸ್ವೀಕರಿಸಿ ಎಂಬ ವಿನೂತನ ಆಫರ್ ನೀಡಿದೆ.
ಕಸ ವಿಲೇವಾರಿ ಸಮಸ್ಯೆಯನ್ನು ಕಡಿಮೆ ಮಾಡಲು ವಿನೂತನ ಯೋಜನೆಯೊಂದನ್ನು ಶುರುಮಾಡಿದ್ದಾರೆ, ಅದೇನೆಂದರೆ, ಗಾರ್ಬೇಜ್ ಹೋಟೆಲ್. ಈ ಹೋಟೆಲ್ ನ ವಿಶೇಷತೆ ಏನೆಂದರೆ, ಇಲ್ಲಿ ಹಣದ ಬದಲಿಗೆ ಕಸವನ್ನು ಪಡೆಯಲಾಗುತ್ತದೆ. ಉದಾಹರಣೆಗೆ 500ಗ್ರಾಂ ಕಸ ತಂದವರಿಗೆ ತಿಂಡಿ, ಹಾಗು 1ಕೆಜಿ ಕಸ ತಂದವರಿಗೆ ಊಟವನ್ನು ಇಲ್ಲಿ ಉಚಿತವಾಗಿ ಕೊಡುತ್ತಾರಂತೆ.
ಈ ಹೋಟೆಲ್ ಛತ್ತೀಸ್ಗಢದ ಅಂಬಿಕಾಪುರದಲ್ಲಿ ನಗರದ ಬಸ್ ನಿಲ್ದಾಣದ ಬಳಿ ಆರಂಭಿಸಬೇಕೆಂದು ಅಂಬಿಕಾಪುರದ ಪಾಲಿಕೆ ತೀರ್ಮಾನಿಸಿದೆ. ಈ ರೀತಿ ಮಾಡುವುದರಿಂದ ಎಲ್ಲೆಂದರಲ್ಲಿ ಕಸ ಹಾಕುವುದು ಕಡಿಮೆಯಾಗುತ್ತದೆ, ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಹಾಯವಾಗುತ್ತದೆ.ಸಧ್ಯ ಈ ಯೋಜನೆ ಕಸ, ಪೇಪರ್ ಆಯುವವರಿಗೆ ಮೀಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಪಾಲಿಕೆ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.