God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

97

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಆಟೋಮೊಬೈಲ್ಸ್

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು!ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…