God

ದೇವರ ಹುಡುಕಾಟದಲ್ಲಿ… ಈ ಲೇಖನ ಓದಿ

91

ದೇವರ ಹುಡುಕಾಟದಲ್ಲಿ…

ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.

ನಮಗಿಂತ ಮೇಲೆ ‌ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.

ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.

ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.

ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ‌ಆತ್ಮವಿಶ್ವಾಸ ಹೆಚ್ಚಿಸಬಹುದು.

ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.

ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.

ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.

ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.

ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ‌ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.

ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.

ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.

ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.

ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.

ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.

ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ‌ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.

ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.

ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.

ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.

ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.

ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?

ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ‌ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.

ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.

ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.

ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.

ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…