ದೇವರು-ಧರ್ಮ

ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

1285

ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ.

ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..?

ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ.

ಘಂಟೆಯಲ್ಲಿ ಇದೆ ವಿಶೇಷತೆ…

ಘಂಟೆಯಲ್ಲಿನ ಪ್ರತಿ ಭಾಗಕ್ಕೂ ಒಂದು ವಿಶೇಷತೆ ಇದೆ. ಅದೇನೆಂದರೆ…ಘಂಟೆ ನಾಲಿಗೆಯಲ್ಲಿ ಸರಸ್ವತಿ ಮಾತೆ ನೆಲೆಸಿರುತ್ತಾರಂತೆ. ಮಹಾರುದ್ರನು ಘಂಟೆಯ ಉದರ ಭಾಗದಲ್ಲಿ, ಮುಖ ಭಾಗದಲ್ಲಿ ಬ್ರಹ್ಮದೇವ, ಕೊನೆಯ ಭಾಗದಲ್ಲಿ ವಾಸುಕಿ ಹಾಗೆಯೇ ಮೇಲಿರುವ ಹಿಡಿ ಭಾಗದಲ್ಲಿ ಪ್ರಾಣಶಕ್ತಿ ಇರುತ್ತದೆ ಎಂದು ಪುರಾಣಗಳು ನಮಗೆ ಹೇಳುತ್ತವೆ.

ಯಾವ ಘಂಟೆ ಹೊಡೆಯುವುದರಿಂದ ಏನು ಲಾಭ…

ನಮಗೆ ಕಷ್ಟಗಳು ಬಂದಾಗ, ಮನಶ್ಯಾಂತಿ ಬೇಕೆಂದುಕೊಂಡಾಗ ನಮ್ಮ ಮನಸ್ಸನ್ನು ಆಧ್ಯಾತ್ಮಿಕ ಭಾವನೆಯಿಂದ ತುಂಬಬೇಕು ಎಂದರೆ ಭಗವಂತನ ಮುಂದೆ ಕಂಚಿನಿಂದ ಮಾಡಿದ ಘಂಟೆಯನ್ನು ಭಾರಿಸಿದರೆ, ಆ ಗಂಟೆಯಿಂದ ಬರುವ “ಓಂಕಾರ” ಶಬ್ದದಿಂದ ದುಷ್ಟ ಶಕ್ತಿಗಳು ದೂರವಾಗಿ, ನಮ್ಮ ಕಷ್ಟಗಳು ದೂರವಾಗುತ್ತವೆ ಎಂದು ಕರ್ಮ ಸಿದ್ಧಾಂತ ನಮಗೆ ತಿಳಿಸುತ್ತದೆ.

ಆರತಿ ಸಮಯದಲ್ಲಿ ಘಂಟೆ ಹೊಡೆದರೆ, ನಮ್ಮ ಮನೆಯಲ್ಲಿ ಅಥವಾ ದೇವಾಲಯದಲ್ಲಿನ ದೇವಮೂರ್ತಿಗಳ ವಿಗ್ರಹಗಳೊಳಗೆ ದೇವತೆಗಳನ್ನು ಆಹ್ವಾನಿಸುತ್ತಿದ್ದೇವೆಂದು ಅರ್ಥ.ಆರತಿ ಸಮಯದಲ್ಲಿ ಘಂಟೆ ಹೊಡೆಯುವ ಸಂದರ್ಭದಲ್ಲಿ ಕಣ್ಣು ಮುಚ್ಚಿಕೊಳ್ಳಬಾರದು. ಆ ಸಮಯದಲ್ಲಿ ಆರತಿ ಕೊಡುತ್ತಾ, ಘಂಟೆ ಭಾರಿಸುತ್ತಾ ದೈವವನ್ನು ಆಹ್ವಾನಿಸುತ್ತಾ ಪೂಜಾರಿ ನಮಗೆ ತೋರಿಸುತ್ತಿದ್ದಾರೆ ಎಂದರ್ಥ.

ಕೆಲವು ಆಲಯಗಳಲ್ಲಿ ಘಂಟೆಗಳ ಗೊಂಚಲನ್ನು ನಾವು ನೋಡುತ್ತಿರುತ್ತೇವೆ. ಆ ರೀತಿಯ ಘಂಟೆಗಳನ್ನು ಹೊಡೆಯುವುದರಿಂದ ಯಾವುದೇ ಪ್ರಯೋಜನವಾಗಲ್ಲ. ಅವು ಕೇವಲ ಅಲಂಕಾರಕ್ಕೆ ಮಾತ್ರ ಸೀಮಿತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…