ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.
ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.
ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…