ಸಿನಿಮಾ

ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

789

ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಬುಧವಾರ(ಮೇ 31) ಬೆಳಗ್ಗೆ 4.40ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಎಂಎಸ್ ರಾಮಯ್ಯ ಡಾ. ಸಂಜಯ್ ಕುಲಕರ್ಣಿ ಪ್ರಕಟಿಸಿದ್ದಾರೆ. ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪಾರ್ವತಮ್ಮ ಅವರು ಕನ್ನಡ ಚಲನಚಿತ್ರರಂಗದ ವರನಟ ಡಾ. ರಾಜ್ ಕುಮಾರ್ ಅವರ ಪತ್ನಿಯಾಗಿ, ಚಿತ್ರರಂಗದ ಶಕ್ತಿಯಾಗಿ ಬೆಳೆದವರು. ಪಾರ್ವತಮ್ಮ ಅವರು ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್, ಇಬ್ಬರು ಪುತ್ರಿಯರಾದ ಪೂರ್ಣಿಮಾ, ಲಕ್ಷ್ಮಿ, ಸೋದರರಾದ ಎಸ್ಎ ಚಿನ್ನೇಗೌಡ, ಗೋವಿಂದರಾಜ್ ಹಾಗೂ ಶ್ರೀನಿವಾಸ್ ಸೇರಿದಂತೆ ಮೊಮ್ಮಕ್ಕಳು, ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.

ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು.

ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು. ಡಾ. ರಾಜ್ ಅಭಿನಯದ ಹಾಲು ಜೇನು, ಕವಿರತ್ನ ಕಾಳಿದಾಸ, ಜೀವನ ಚೈತ್ರ , ಶಿವರಾಜ್ ಅಭಿನಯದ ಆನಂದ್, ಓಂ, ಜನುಮದ ಜೋಡಿ, ರಾಘವೇಂದ್ರ ರಾಜ್ ಕುಮಾರ್ ಅಭಿನಯದ ನಂಜುಂಡಿ ಕಲ್ಯಾಣ, ಪುನೀತ್ ಅಭಿನಯದ ಅಪ್ಪು, ಅಭಿ, ಹುಡುಗರು ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿದವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ