ಸುದ್ದಿ

ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

390

ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ.

ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ.

ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದ್ದು, ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣೆಯ ಪಿಎಸ್‍ಐ ಬಸವರಾಜ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸವ ಭಕ್ತರು ಶ್ವಾನದಳ ಬಂದು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ