ರಾಜಕೀಯ

ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

1080

ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

ಹಾಗೆಯೇ ಈಗ ರಮ್ಯಾರವರು ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಕೆಣುಕುವಂತ  ಪೋಸ್ಟ್’ಗಳನ್ನು ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಣಕಿ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪೇಚಿಗೆ ಸಿಲುಕಿದ್ದಾರೆ.

ಅವರ ವಿರುದ್ಧ ಟ್ವಿಟರ್ನಲ್ಲಿ ಟೀಕೆ, ವ್ಯಂಗ್ಯದ ಸಂದೇಶಗಳು ಹರಿದಾಡತೊಡಗಿದ್ದು, ಈಗ ಇದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಮ್ಯಾರವರು ಮೋದಿಯನ್ನು ಕೆಣಕಿದ ಆ ಸಂದೇಶ ಏನು ಗೋತಾ..?

‘ಅಸ್ಸಾಂ, ಗುಜರಾತ್, ಬಿಹಾರದ ಪ್ರವಾಹ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇರುವ ಚಿತ್ರವನ್ನು ತೋರಿಸಿದರೆ ನಿಮಗೆ  25,000 ನೀಡುತ್ತೇನೆ. ಚಿತ್ರವು ಫೋಟೊಶಾಪ್ ಮಾಡಿದ್ದಾಗಿರಬಾರದು’ ಎಂದು ರಮ್ಯಾ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಅಲ್ಲದೆ, ‘ಅಸ್ಸಾಂ, ಗುಜರಾತ್ ಅಥವಾ ಬಿಹಾರದ ಪ್ರವಾಹ ಸಂತ್ರಸ್ತರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿರುವ ಒಂದೇ ಒಂದು ಚಿತ್ರವೂ ಕಂಡುಬಂದಿಲ್ಲ’ ಎಂದು ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

ರಮ್ಯಾರವರ  ವಿರುದ್ದ ಟ್ವಿಟರ್ನಲ್ಲಿ ಟೀಕೆಗಳ ಸಮರ :-

ರಮ್ಯಾ ಅವರು ತುಂಡುಡುಗೆ ಧರಿಸಿ ಕಡಲ ಕಿನಾರೆಯಲ್ಲಿ ನಿಂತಿರುವ ಚಿತ್ರವನ್ನು ಪ್ರಕಟಿಸಿರುವ ವ್ಯಕ್ತಿಯೊಬ್ಬರು ‘ಪ್ರವಾಹ ಸಂತ್ರಸ್ತರೊಬ್ಬರನ್ನು ರಕ್ಷಿಸಿದ ಬಳಿಕ ರಮ್ಯಾ ಮೇಡಂ’ ಎಂದು ವ್ಯಂಗ್ಯವಾಡಿದ್ದಾರೆ.

‘ಪ್ರವಾಹಪೀಡಿತ ಪ್ರದೇಶದಲ್ಲಿ ರಮ್ಯಾ ಅವರಿರುವ ವಿರಳ ಚಿತ್ರ’ ಎಂದು ವಿಕಾಸ್ ಕಲಾಪುರ್ ಎಂಬುವವರು ಟ್ವೀಟ್ ಮಾಡಿದ್ದಾರೆ. ಇಂಥದ್ದೇ ಇನ್ನೂ ಹಲವು ಟ್ವೀಟ್ಗಳು ಪ್ರಕಟವಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…