ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಹೌದು.ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದ ಒಂದು ಮದುವೆಯಲ್ಲಿ, ವರ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ್ದಾಳೆ.
ಉತ್ತರಪ್ರದೇಶದ ಶಹಜಹಾನ್ಪುರದ ಪ್ರಿಯಾಂಕಾ ತ್ರಿಪಾಠಿ ಮತ್ತು ಅನುಭವ್ ಮಿಶ್ರಾ ಅವರ ಮದುವೆಯನ್ನು ಕುಟುಂಬಸ್ಥರು ನಿಗದಿ ಮಾಡಿದ್ದರು. ಎಲ್ಲಾ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರನು ಕುಡಿದ ಸ್ಥಿತಿಯಲ್ಲಿ, ನಾಗಿಣಿ ಡ್ಯಾನ್ಸ್ ಮಾಡಿ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾನೆ.
ವರ ಅನುಭವ್ ಮಿಶ್ರಾ ಮಾಡಿದ ನಾಗಿಣಿ ಡ್ಯಾನ್ಸ್ ನಿಂದ ಮುಜುಗರವಾದ ಕಾರಣ, ಇನ್ನೇನು ಮದುವೆಯ ಶಾಸ್ತ್ರಗಳು ಆರಂಭವಾಗಬೇಕಿದ್ದ ಕೆಲವೇ ಸಮಯದ ಮುಂಚೆ ವಧು ಮದುವೆ ನಿರಾಕರಿಸಿದ್ದಾಳೆ.
ವರನ ಸಂಬಂಧಿಕರು ಹಾಗೂ ಸ್ನೇಹಿತರು ವಧು ಪ್ರಿಯಾಂಕಾಳ ಮನವೊಲಿಸಲು ಪ್ರಯತ್ನಿಸಿದರಾದ್ರೂ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ವಧುವಿನ ತಂದೆಯೂ ಕೂಡ ಮಗಳ ನಿರ್ಧಾರವನ್ನು ಬೆಂಬಲಿಸಿದ್ದಾರೆ. ವರ ಮಾಡಿದ ಕೆಲಸದಿಂದ ನಿಜಕ್ಕೂ ಮುಜುಗರ ಅನುಭವಿಸಬೇಕಾಯ್ತು. ಆದ್ದರಿಂದ ನಾನು ನನ್ನ ಮಗಳ ಪರ ನಿಲ್ಲಬೇಕಾಯ್ತು ಎಂದು ಅವರು ಹೇಳಿದ್ದಾರೆ.
ಕೊನೆಗೆ ಪ್ರಿಯಾಂಕಾ ಮರುದಿನವೇ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.