ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಮೊದಲ ಕಂತಿನ ಹಣ ಆಧಾರ್ ಇಲ್ಲದೆ ಸಿಗಲಿದೆ. ಆದ್ರೆ ಎರಡನೇ ಕಂತಿನ ಹಣ ಪಡೆಯುವ ಮೊದಲು ರೈತ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಈವರೆಗೂ ಆಧಾರ್ ಕಾರ್ಡ್ ಹೊಂದಿರದ ರೈತರು ತಕ್ಷಣ ಆಧಾರ್ ಕಾರ್ಡ್ ಮಾಡಿಸಿಕೊಂಡಲ್ಲಿ ಯೋಜನೆ ಲಾಭ ಪಡೆಯಬಹುದಾಗಿದೆ.
ಆಧಾರ್ ಕಾರ್ಡ್ ಪಡೆಯುವುದು ದೊಡ್ಡ ಕೆಲಸವೇನಲ್ಲ. ವೆಬ್ ಸೈಟ್ ನಲ್ಲಿ ನಿಮಗೆ ಫಾರ್ಮ್ ಸಿಗಲಿದೆ. https://appointments.uidai.gov.in ವೆಬ್ ಸೈಟ್ ಗೆ ಹೋಗಿ ನೀವು ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ಫಾರ್ಮ್ ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ. ಇದೇ ವೆಬ್ ಸೈಟ್ ನಲ್ಲಿ ಹತ್ತಿರ ಯಾವ ಯಾವ ಆಧಾರ್ ಕಾರ್ಡ್ ಸೆಂಟರ್ ಇದೆ ಎಂಬ ಮಾಹಿತಿ ಸಿಗಲಿದೆ. ಅಲ್ಲಿಗೆ ಹೋಗಿ ಅರ್ಜಿ ಜೊತೆ ದಾಖಲೆ ನೀಡಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು.
ಆಧಾರ್ ಕಾರ್ಡ್, ಅಂಚೆ ಕಚೇರಿ ಮೂಲಕ ನಿಮ್ಮ ಮನೆಗೆ ಬರಲಿದೆ. ಒಂದು ವೇಳೆ ಅಂಚೆ ಕಚೇರಿ ಮೂಲಕ ಆಧಾರ್ ಕಾರ್ಡ್ ಮನೆಗೆ ಬರದೆ ಹೋದಲ್ಲಿ ವೆಬ್ ಸೈಟ್ ನಲ್ಲಿರುವ ಆಧಾರ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….