ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.
ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.
ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.
ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…