ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.
ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…
ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…