ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ ದೇಬ್, ತಮ್ಮ ಮಹಿಳಾ ಸಹೋದ್ಯೋಗಿ ಸಮಾಜ ಕಲ್ಯಾಣ ಸಚಿವೆ ಸಂತನಾ ಚಕ್ಮಾ ಅವರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇರುಸುಮುರುಸು ಸಂತನಾ ಕೈ ತಳ್ಳಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಂತೆ ಪ್ರತಿಪಕ್ಷಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿವೆ. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕೂಡಾ ಪಾಲ್ಗೊಂಡಿದ್ದು, ಈ ಘಟನೆಯಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮನೋಜ್ ಕಾಂತಿ ದೇಬ್ ಆರೋಪವನ್ನು ನಿರಾಕರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.