ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ. ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.
ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.
ಇದೇ ಮೊದಲಲ್ಲ:-
ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್‍ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು.
ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.
ಭಾಷಣ ವೇಳೆ ಮತ್ತೊಂದು ಅಚ್ಚರಿ:-
ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.
ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟ್‌ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.